ಕೇರಳ ಎರ್ನಾಕುಲಂನಲ್ಲಿ ಪ್ರಾರ್ಥನಾ ಕೇಂದ್ರದಲ್ಲಿ ಸ್ಫೋಟ- ಓರ್ವ ಮಹಿಳೆ ಸಾವು, 37 ಮಂದಿಗೆ ಗಾಯ: ಓರ್ವನ ಬಂಧನ
ಕೇರಳದ ಎರ್ನಾಕುಲಂನ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸ್ಫೋಟದ ಬಳಿಕ ಕೇರಳ ಪೊಲೀಸರು ರಾಜ್ಯಾದ್ಯಂತ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಈ ನಡುವೆ ಕೊಚ್ಚಿಯ ವ್ಯಕ್ತಿಯೊಬ್ಬ ಸ್ಫೋಟದ ಹೊಣೆ ಹೊತ್ತು ಪೊಲೀಸರಿಗೆ ಶರಣಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 37 ಮಂದಿ ಗಾಯಗೊಂಡಿದ್ದಾರೆ.
ಭಾನುವಾರ ಬೆಳಗ್ಗೆ ಕ್ರಿಶ್ಚಿಯನ್ನರ ಸಭೆಯೊಂದರ ಸಮಯದಲ್ಲಿ ಟಿಫಿನ್ ಬಾಕ್ಸ್ನಿಂದ ಮೊದಲ ಸ್ಫೋಟ ಸಂಭವಿಸಿತ್ತು.
ಸ್ಫೋಟದ ಬಳಿಕ ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಿದ್ದಾನೆ. ಪೊಲೀಸರು ವ್ಯಕ್ತಿಯನ್ನು ಕೊಚ್ಚಿಯಿಂದ ಕರೆದೊಯ್ದಿದ್ದಾರೆ, ಆತ ಯಾವುದಾದರೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಆತ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ, ತಾನೇ ಈ ಅಪರಾಧವೆಸಗಿರುವುದಾಗಿ ಒಪ್ಪಿಕೊಂಡಿದ್ದಾನೆ, ಕಣ್ಣೂರು ಪೊಲೀಸರು ವ್ಯಕ್ತಿಯೊಬ್ಬನ ಬ್ಯಾಗ್ನಲ್ಲಿ ಅನುಮಾನಾಸ್ಪದ ವಸ್ತುಗಳನ್ನು ಗುರುತಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.