‘ಮೀಫ್’ ಸಂಸ್ಥೆಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮುಸ್ಲಿಂ ಸಮುದಾಯದಲ್ಲಿ ಶೈಕ್ಷಣಿಕ ಕ್ರಾಂತಿ ಸೃಷ್ಟಿಸಿದ ‘ಮೀಫ್’ ಸಂಘಟನೆ ಕರ್ನಾಟಕ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ.
ರಾಜ್ಯದ ಮಾಜಿ ಉನ್ನತ ಶಿಕ್ಷಣ ಸಚಿವ ಬಿ.ಎ.ಮೊಹಿದಿನ್ ಅವರ ಕನಸಿನ ಕೂಸಾದ ‘ಮುಸ್ಲಿಂ ಎಜುಕೇಶನ್ ಇನ್‌ಸ್ಟಿಟ್ಯೂಶನ್ಸ್ ಫೆಡರೇಶನ್’ (ಮೀಫ್) ಕಳೆದ 22 ವರ್ಷಗಳಲ್ಲಿ ಸಲ್ಲಿಸಿದ ಶೈಕ್ಷಣಿಕ ಸೇವೆಯನ್ನು ಗುರುತಿಸಿ ಪ್ರಶಸ್ತಿ ಯನ್ನು ರಾಜ್ಯ ಸರಕಾರ ಘೋಷಿಸಿದೆ.