ಮಡಿಕೇರಿ: ಕಾಮಗಾರಿ ವೇಳೆ ಬರೆ ಕುಸಿತ: ಮೂವರು ದಾರುಣ ಸಾವು
ಮಡಿಕೇರಿಯ ಸ್ಟೀವರ್ಟ್ ಹಿಲ್ ಬಳಿ ಕಟ್ಟಡ ಕಾಮಗಾರಿಗೆ ಮಣ್ಣು ತೆಗೆಯುವ ಕೆಲಸ ಮಾಡುತ್ತಿದ್ದ ವೇಳೆ ಬರೆ ಕುಸಿದು ಮೂವರು ಮಣ್ಣಿನ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು ವರದಿಯಾಗಿದೆ.
ಮಣ್ಣಿನಡಿಯಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಬಸವ, ಲಿಂಗಪ್ಪ, ಆನಂದ ಎಂದು ಗುರುತಿಸಲಾಗಿದೆ.
ಮಣ್ಣಿನಡಿಯಲ್ಲಿ ಸಿಲುಕಿದ್ದ ಓರ್ವನ ಮೃತದೇಹ ಪತ್ತೆಯಾಗಿದ್ದು ಮತ್ತಿಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಅಗ್ನಿಶಾಮಕ ದಳ ಹಾಗೂ ಸ್ಥಳೀಯರಿಂದ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.