ಸೊರಕೆ: ಪ್ರತಿಭಾನ್ವಿತ ವಿದ್ಯಾರ್ಥಿ ನಿಧನ
ಪುತ್ತೂರು: ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಸುಪ್ರೀತ್ ಅವರು ನ.1ರಂದು ನಿಧನರಾಗಿದ್ದಾರೆ.
ಎರಡು ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾದ ಸುಪ್ರೀತ್ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಅವರು ಕೊನೆಯುಸಿರೆಳೆದಿದ್ದಾರೆ.
ಸುಪ್ರೀತ್ ಅವರು ಮುಂಡೂರು ಗ್ರಾ.ಪಂ ಮಾಜಿ ಸದಸ್ಯೆ ಕುಸುಮಾ ಪೆರಂಟೋಳು ಮತ್ತು ಕುಂಞ ಮೇಸ್ತ್ರಿ ಅವರ ಪುತ್ರ.
ಮೃತ ಸುಪ್ರೀತ್ ಅವರು ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು ಶಾಲೆಯ ಎಲ್ಲ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಳ್ಳುತ್ತಿದ್ದ ಎಂದು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿ ತಿಳಿಸಿದ್ದಾರೆ.