ಸುಳ್ಯ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮ
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸುಳ್ಯ ಪೊಲೀಸ್ ಠಾಣೆಯಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.
ಸದಾ ಒತ್ತಡದ ಕೆಲಸ ನಿರ್ವಹಿಸುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಠಾಣೆಯ ಆವರಣದಲ್ಲಿ ಕನ್ನಡ ಹಬ್ಬದ ಸೌಂದರ್ಯವನ್ನು ಹೆಚ್ಚಿಸಿ ಕರ್ನಾಟಕ ರಾಜ್ಯದ ಸುಂದರ ಚಿತ್ರವನ್ನು ರಂಗೋಲಿ ಮೂಲಕ ಬಿಡಿಸಿ ಅದರ ಸುತ್ತಲೂ ದೀಪವನ್ನು ಹಚ್ಚಿ ಹಚ್ಚೇವು ಕನ್ನಡದ ದೀಪ ಎಂಬ ಪದವನ್ನು ಬರೆದು ಹಬ್ಬದ ರೀತಿಯಲ್ಲಿ ಕಾರ್ಯಕ್ರಮವನ್ನು ಸಂಭ್ರಮಿಸಿದರು.
ಈ ಕಾರ್ಯಕ್ರಮಕ್ಕೆ ಸಂಪೂರ್ಣ ಪ್ರೋತ್ಸಾಹ ನೀಡಿದ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು ಮಾತನಾಡಿ ‘ಕನ್ನಡಕ್ಕಾಗಿ ದುಡಿದ ಮಹಾನ್ ಗಣ್ಯರ ಬಗ್ಗೆ ಗುಣಗಾನಗಳನ್ನು ಮಾಡಿ, ಕನ್ನಡ ಪದದ ಬಳಕೆಯ ಮಹತ್ವದ ಕುರಿತು ಮಾತನಾಡಿ ಸರ್ವರಿಗೂ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪರಿಸರ ಅಲಂಕೃತಗೊಳಿಸಲು ಎಲ್ಲಾ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಮನೆಯ ಸದಸ್ಯರು ಮತ್ತು ಪುಟಾಣಿ ಮಕ್ಕಳು ಭಾಗವಹಿಸಿ ಸಂತೋಷಪಟ್ಟರು.
ಈ ಸಂದರ್ಭದಲ್ಲಿ ತನಿಖಾ ವಿಭಾಗದ ಎಸ್ ಐ ಸರಸ್ವತಿ,ಎ ಎಸ್ ಐ ಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪೊಲೀಸರ ಈ ನಡೆ ಮೆಚ್ಚುಗೆಗೆ ಪಾತ್ರವಾಗಿದೆ.