ಸುಳ್ಯ: ಉಡುಪಿ ಗಾರ್ಡನ್ ಹೋಟೆಲ್ ಮುಂಬಾಗ ಏಕಾಏಕಿ ಕುಸಿದ ಭೂಮಿ
ಸುಳ್ಯ ಪರಿವಾರಕಾನ ಉಡುಪಿ ಗಾರ್ಡನ್ ಹೋಟೆಲ್ ಮುಂಬಾಗ ಇದೀಗ ಕೆಲ ಹೊತ್ತಿನ ಮೊದಲು ಸುರಿದ ಭಾರಿ ಮಳೆಗೆ ಏಕಾಏಕಿ ಭೂಮಿ ಕುಸಿದು ಬೃಹತ್ ಹೊಂಡ ನಿರ್ಮಾಣವಾಗಿದೆ.
ಸುಮಾರು ಹತ್ತು ಅಡಿಯಷ್ಟು ಉದ್ದಕ್ಕೆ ಗುಂಡಿ ನಿರ್ಮಾಣವಾಗಿದ್ದು ಪಕ್ಕದಲ್ಲಿ ಇರುವ ವಿದ್ಯುತ್ ಕಂಬ ಬೀಳುವ ಆತಂಕ ಎದುರಾಗಿದೆ.
ಸ್ಥಳೀಯರು ಮೆಸ್ಕಾಂನವರಿಗೆ ಮಾಹಿತಿ ತಿಳಿಸಿದ್ದು ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.