ವಿಟ್ಲ: ಇಬ್ಬರು ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಯುವಕ ಅರೆಸ್ಟ್
ವಿಟ್ಲ: ಇನ್ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿ ಬಾಲಕಿಯರಿಬ್ಬರಿಗೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯುವಕನೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಸಾಲೆತ್ತೂರು ಮೂಲದ ಬಾಲಕಿಗೆ ಇನ್ಸ್ಟಾಗ್ರಾಮ್ ಮೂಲಕ ಹುಡುಗಿಯ ಹೆಸರಿನಲ್ಲಿ ಕೇರಳ ಮೂಲದ ಯುವಕ ಪರಿಚಯವಾಗಿದ್ದು, ಆತ್ಮೀಯತೆ ಬೆಳೆದು ದೈಹಿಕ ಸಂಬಂಧದ ಹಂತಕ್ಕೆ ತಲುಪಿದೆ. ಇದೇ ರೀತಿಯಲ್ಲಿ ಪಕ್ಕದ ಮನೆಯ ಬಾಲಕಿಗೂ ವ್ಯಕ್ತಿಯ ಪರಿಚಯವಾಗಿದೆ. ಇಬ್ಬರು ಬಾಲಕಿರು ತಮ್ಮ ವಿಚಾರ ಹಂಚಿಕೊಂಡಾಗ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಯುವಕ ಒಬ್ಬನೇ ಎಂಬುದು ಬೆಳಕಿಗೆ ಬಂದಿದೆ.
ಇಬ್ಬರ ಜತೆಗೂ ದೈಹಿಕ ಸಂಪರ್ಕ ನಡೆಸಿದ ಯುವಕನ ವಿರುದ್ಧ ಕೆಲವು ದಿನಗಳ ಹಿಂದೆ ಬಾಲಕಿಯ ಮನೆಯವರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಪ್ರತ್ಯೇಕ ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.