ಕರಾವಳಿರಾಜ್ಯ

ಬೆಂಗಳೂರು ಕಂಬಳ ಹೊಸ ಇತಿಹಾಸ ನಿರ್ಮಿಸಲಿದೆ: ಅಶೋಕ್ ರೈ



ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಒಂದು ಕೋಟಿ ರೂ ನೀಡುವುದಾಗಿ ಘೋಷಣೆ ಮಾಡಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ. ಬೆಂಗಳೂರು ಕಂಬಳ ಹೊಸ ಇತಿಹಾಸವನ್ನು ನಿರ್ಮಿಸಲಿದ್ದು ಅಂತರರಾಷ್ಟ್ರೀಯ ಮಟ್ಟದಲ್ಲೂ ಖ್ಯಾತಿಯನ್ನು ಪಡೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಪುತ್ತೂರು ಶಾಸಕ, ಕಂಬಳ ಸಮಿತಿ ಅಧ್ಯಕ್ಷರೂ ಆಗಿರುವ ಅಶೋಕ ಕುಮಾರ್ ರೈ ಹೇಳಿದ್ದಾರೆ.

ಕಂಬಳಕ್ಕೆ ಬೇಕಾದ ಎಲ್ಲಾ ಸಿದ್ದತೆಗಳು ಭರದಿಂದ ಸಾಗುತ್ತಿದ್ದು ವಿವಿಧ ತುಳು ಸಂಘಟನೆಗಳು ಮತ್ತು ಕರಾವಳಿಯ ವಿವಿಧ ಸಂಘಟನೆಗಳ ಸಹಕಾರದಿಂದ ಎಲ್ಲಾ ಕೆಲಸಗಳು ಸುಸೂತ್ರವಾಗಿ ನಡೆಯುತ್ತಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!