ಕಲ್ಲೇಗ ಟೈಗರ್ಸ್ ನ ಅಕ್ಷಯ್ ಬರ್ಬರ ಕೊಲೆ
ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ನಡೆದಿದೆ.
ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಪುತ್ತೂರಿನಲ್ಲಿ ಕಲ್ಲೇಗ ಟೈಗರ್ಸ್ ಎಂಬ ಸಂಘಟನೆ ಕಟ್ಟಿಕೊಂಡು ಯುವಕರನ್ನು ಒಟ್ಟಾಗಿ ಸೇರಿಸಿಕೊಂಡು ಮುನ್ನಡೆಯುತ್ತಿದ್ದು, ಇದೀಗ ಈತನ ಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಜನರು ನಗರದತ್ತ ಆಗಮಿಸುತ್ತಿದ್ದಾರೆ.