ಕಡಬ: ಹೆರಿಗೆಗಾಗಿ ಆಸ್ಪತ್ರೆಗೆ ಹೋಗುತ್ತಿದ್ದ ವೇಳೆ ಆಂಬ್ಯುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ
ಕಡಬ: ಹೆರಿಗೆಯ ಹೊಟ್ಟೆ ನೋವೆಂದು ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಹೋಗುತ್ತಿದ್ದಾಗ ದಾರಿ ಮಧ್ಯೆ ತಾಯಿ ಮಗುವಿಗೆ ಜನ್ಮ ನೀಡಿದ ಘಟನೆ ನ.9.ರಂದು ಪಂಜದಿಂದ ವರದಿಯಾಗಿದೆ.
ಸುರೇಶ್ ಎಂಬವರ ಪತ್ನಿ ಗಾಯತ್ರಿ ಎಂಬವರಿಗೆ ಹೆರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಈ ವೇಳೆ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಅಂಬ್ಯುಲೆನ್ಸ್ ಗೆ ಅವರು ಮುಂಜಾನೆ ಕರೆ ಮಾಡಿದ್ದರು. ತಕ್ಷಣ ದಯಾನಂದ ಬೇರ್ಯರವರು ಅಂಬ್ಯುಲೆನ್ಸ್ ನಲ್ಲಿ ಕಡಬ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಹೋಗುತ್ತಿದ್ದರು. ಆದರೆ ಪುಳಿಕುಕ್ಕು ತಲುಪುವಾಗ ಅಂಬ್ಯುಲೆನ್ಸ್ ನಲ್ಲಿ ಗಾಯತ್ರಿ ಯವರು ಗಂಡು ಮಗುವಿಗೆ ಜನ್ಮ ನೀಡಿದ್ದು ಬಳಿಕ ಕಡಬ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ತಾಯಿ, ಮಗು ಆರೋಗ್ಯವಾಗಿದ್ದಾರೆ. ಎಂದು ತಿಳಿದು ಬಂದಿದೆ.