ಬ್ರೈಟ್ ಭಾರತ್ ಸಂಸ್ಥೆಯಿಂದ ಪುತ್ತೂರು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ವಿತರಣೆ
ಪುತ್ತೂರು: ಉದ್ಯಮದ ಜೊತೆಗೆ ಸಾಮಾಜಿಕ ಕೆಲಸದಲ್ಲಿ ತೊಡಗಿಸಿಕೊಂಡಿರುವ ಬ್ರೈಟ್ ಭಾರತ್ ಸಂಸ್ಥೆ ವತಿಯಿಂದ ಪುತ್ತೂರು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.
ಸಾಮಾಜಿಕ ಕೆಲಸಕ್ಕೆ ಪ್ರಾಧಾನ್ಯತೆ ನೀಡಬೇಕು ಎನ್ನುವ ಉದ್ದೇಶದಿಂದ, ಸಂಸ್ಥೆಯು ಕೆಲವು ದಿನಗಳ ಹಿಂದೆ ಪುತ್ತೂರಿನ ಪ್ರಜ್ಞಾ ಆಶ್ರಮಕ್ಕೆ ವಿಲ್ ಚಯರ್ ನೀಡಿತ್ತು. ಜೊತೆಗೆ ತಮ್ಮ ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಮೂವರು ಸಮಾಜ ಸೇವಕರಿಗೆ ಸನ್ಮಾನಿಸಿ, ಸಮಾಜ ಸೇವೆಗೆ ಪ್ರೋತ್ಸಾಹಿಸಿತ್ತು. ಇದೀಗ ಮುಂದುವರಿದ ಭಾಗವಾಗಿ ಸಂಸ್ಥೆಯ ವತಿಯಿಂದ ಪುತ್ತೂರು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಕಾವು, ಫಾರೂಕ್ ಬಾಯಬೆ, ರವಿ ಶೆಟ್ಟಿ, ಅಲಿ ಪರ್ಲಡ್ಕ, ನಝೀರ್ ಸವಣೂರು, ಹರ್ಷಾದ್ ಪುತ್ತೂರು, ಇರ್ಷಾದ್ ಮುಕ್ವೆ ಹಾಗೂ ಸಂಸ್ಥೆಯ ಪಾಲುದಾರರು ಉಪಸ್ಥಿತರಿದ್ದರು.