ಕರಾವಳಿ

ತಲವಾರು ಝಳಪಿಸಿದ ಪ್ರಕರಣ: ಪುತ್ತಿಲ ಪ್ರತಿಕ್ರಿಯಿಸಿದ್ದೇನು..?ಪುತ್ತೂರು: ಮುಕ್ರಂಪಾಡಿಯಲ್ಲಿ ತಲವಾರು ಝಳಪಸಿದ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯೆ ನೀಡಿದ್ದು ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ, ರೌಡಿಸಂ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಪೊಲೀಸರು ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪುತ್ತೂರು ಶಾಂತಿಯಿಂದ ಇರಬೇಕು. ಸಮಾಜದ ಶಾಂತಿ ಕದಡಲು ಯಾರೂ ಅವಕಾಶ ನೀಡಬಾರದು. ಕಚೇರಿ ಬಳಿಗೆ ಯಾರು ಬಂದಿದ್ದಾರೆ ಎನ್ನುವ ಮಾಹಿತಿ ನನಗೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

10 ಜನರ ತಂಡ ಅಲ್ಲಿಗೆ ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು ಸಿಸಿ ಟಿವಿಯಲ್ಲಿ ದಾಖಲಾಗಿರುವ ದೃಶ್ಯದಲ್ಲಿ ಎಲ್ಲವೂ ಗೊತ್ತಾಗಲಿದೆ. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರು ಹಾಗೂ ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ, ನ್ಯಾಯ ಸಿಗುತ್ತದೆ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

error: Content is protected !!