ಕರಾವಳಿಕ್ರೈಂ

ಪುತ್ತೂರು:ತಲವಾರು ಝಳಪಿಸಿದ ಪ್ರಕರಣ-ಆರೋಪಿಗಳ ಬಂಧನ



ಪುತ್ತೂರು: ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ರಂಪಾಡಿ ಎಂಬಲ್ಲಿ ಕೆಲ ಯುವಕರು ಸಾರ್ವಜನಿಕವಾಗಿ ತಲವಾರು ಪ್ರದರ್ಶಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟಣೆ ನಡೆದ ತಕ್ಷಣವೇ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪುತ್ತೂರು ಶಾಂತಿಗೋಡು ಗ್ರಾಮದ ದಿನೇಶ ಪಂಜಿಗ (38) ನರಿಮೊಗರು ಗ್ರಾಮದ ಭವಿತ್ (19), ಪುತ್ತೂರು ಬೊಳ್ವಾರು ನಿವಾಸಿ ಮನ್ವಿತ್ (19), ಆರ್ಯಾಪು ಗ್ರಾಮದ ಜಯಪ್ರಕಾಶ (18), ಚಿಕ್ಕಮುಡ್ನೂರು ಗ್ರಾಮದ ಚರಣ್ (23) ಪುತ್ತೂರು ಬನ್ನೂರು ಗ್ರಾಮದ ಮನೀಶ (23), ಪುತ್ತೂರು ಕಸಬಾ ಗ್ರಾಮದ ವಿನೀತ್ (19)
ಹಾಗೂ ಇಬ್ಬರು ಅಪ್ರಾಪ್ತ ಪ್ರಾಯದ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದು, ಅವರುಗಳ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ: 108/2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!