ಕರಾವಳಿ

.ಕ ಜಿಲ್ಲಾ ಪೊಲೀಸ್ ಕ್ರೀಡಾ ಕೂಟ: ಕ್ರಿಕೆಟ್ ಪಂದ್ಯಾಟದಲ್ಲಿ ಸುಳ್ಯ ಸರ್ಕಲ್ ಪ್ರಥಮ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮ ಮಂಗಳೂರು ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ಈ ಕ್ರೀಡಾಕೂಟದ ಕ್ರಿಕೆಟ್ ಪಂದ್ಯಾಟದಲ್ಲಿ ಸುಳ್ಯ ಪೊಲೀಸ್ ಸರ್ಕಲ್ ಪುತ್ತೂರು ತಂಡವನ್ನು ಸೋಲಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.


ಈ ಪಂದ್ಯಕೂಟದಲ್ಲಿ ಬಂಟ್ವಾಳ, ಪುತ್ತೂರು, ಸುಳ್ಯ, ಡಿಆರ್ ಮಂಗಳೂರು, ಬೆಳ್ತಂಗಡಿ ಪೊಲೀಸ್ ಸರ್ಕಲ್ ಸೇರಿದಂತೆ 5 ತಂಡಗಳು ಭಾಗವಹಿಸಿದ್ದವು.
ಫೈನಲ್ ಪಂದ್ಯಾಟದಲ್ಲಿ ಪುತ್ತೂರು ಪೊಲೀಸ್ ಸರ್ಕಲ್ ತಂಡವನ್ನು ಸುಳ್ಯ ತಂಡ ಸೋಲಿಸಿ ಪ್ರಥಮ ಬಹುಮಾನದ ವಿನ್ನರ್ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದೆ.


ಸುಳ್ಯ ಸರ್ಕಲ್ ಪೊಲೀಸ್ ತಂಡದ ನಾಯಕತ್ವವನ್ನು ಸುಳ್ಯ ವೃತ್ತ ನಿರೀಕ್ಷಕ ಮೋಹನ್ ಕುಮಾರ್, ಉಪನಿರೀಕ್ಷಕ ಈರಯ್ಯ ದೂಂತೂರು,ಸುಬ್ರಹ್ಮಣ್ಯ ಠಾಣಾ ಉಪನಿರೀಕ್ಷಕ ಮುರುಳಿಧರ್ ವಹಿಸಿಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!