ಉಡುಪಿ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ.
ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಮೃತರನ್ನು ಹಸೀನಾ (46), ಅಫ್ನಾನ್ (23), ಅಜ್ಞಾಝ್ (21) ಮತ್ತು ಆಸಿಂ (12) ಎಂದು ಗುರುತಿಸಲಾಗಿದೆ.
ಚೂರಿಯಿಂದ ಚುಚ್ಚಿ ಕೊಲೆಗೈದು ದುಷ್ಕರ್ಮಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.