ಉಡುಪಿ: ನಾಲ್ವರ ಭೀಕರ ಹತ್ಯೆ ಪ್ರಕರಣ: ಇನ್ನೂ ಪತ್ತೆಯಾಗದ ಹಂತಕ
ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರುವಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವು ಜಿಲ್ಲೆಯಾದ್ಯಂತ ಭಯದ ವಾತಾವರಣ ಸೃಷ್ಟಿಸಿದ್ದು ಹಂತಕನ ಪತ್ತೆಗೆ ವ್ಯಾಪಕ ಆಗ್ರಹ ವ್ಯಕ್ತವಾಗಿದೆ.
ನಾಲ್ವರ ಹತ್ಯೆ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದ ಸ್ಥಳೀಯರು ಘಟನೆಯ ಶಾಕ್ ನಿಂದ ಇನ್ನೂ ಹೊರ ಬಂದಿಲ್ಲ.ಈಗಾಗಲೇ ಪೊಲೀಸರು ತನಿಖೆ ತೀವ್ರಗೊಳಿಸಿದ್ದು, ಹಂತಕನ ಪತ್ತೆಗಾಗಿ 5 ತಂಡಗಳನ್ನು ರಚಿಸಿ ತನಿಖೆ ಚುರುಕುಗೊಳಿಸಿದ್ದಾರೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುವುದಾಗಿ ಈಗಾಗಲೇ ಎಸ್ಪಿ ಡಾ.ಅರುಣ್ ಹೇಳಿದ್ದಾರೆ.
ಪೊಲೀಸರು ಸಿಸಿಟಿವಿ ಫೂಟೇಜ್ ಕಲೆ ಹಾಕಿದ್ದು ಆರೋಪಿಯನ್ನು ಮನೆಗೆ ಬಿಟ್ಟು ಬಂದ ಆಟೋ ಚಾಲಕನಿಂದಲೂ ಮಾಹಿತಿ ಸಂಗ್ರಹ ಮಾಡಲಾಗಿದೆ. ಶೀಘ್ರ ಆರೋಪಿಯನ್ನು ಪತ್ತೆ ಹಚ್ಚುವ ಸಾಧ್ಯತೆ ಇದೆ.
ಅಫ್ನಾನ್ ಮೇಲಿನ ದ್ವೇಷಕ್ಕೆ ನಾಲ್ವರನ್ನು ಕೊಲೆ ಮಾಡಲಾಗಿದೆ ಎನ್ನುವ ಸುದ್ದಿ ಹಬ್ಬಿದೆಯದರೂ ಅದು ನಿಜವೇ ಎಂದು ತಿಳಿದು ಬಂದಿಲ್ಲ. ಪೊಲೀಸ್ ತನಿಖೆಯಿಂದಷ್ಟೇ ಸತ್ಯಾಂಶ ಹೊರಬರಲಿದೆ. ಘಟನೆಯಿಂದಾಗಿ ಉಡುಪಿ ಜನರು ಆತಂಕಕ್ಕೊಳಗಾಗಿದ್ದು ನಾಲ್ವರನ್ನು ಅಮಾನುಷವಾಗಿ ಕೊಂದು ಹಾಕಿದ ಪಾಲಿಗೆ ಗಲ್ಲು ಶಿಕ್ಷೆ ಕೂಡಲೇ ಬೇಕು ಎಂದು ಆಗ್ರಹಿಸಿದ್ದಾರೆ.