ಉಡುಪಿ: ನಾಲ್ವರ ಬರ್ಬರ ಹತ್ಯೆ ಪ್ರಕರಣ: ಕೇರಳದಲ್ಲಿ ಆರೋಪಿ ಸುಳಿವು..?
ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತ್ತೆಗಾಗಿ ಪೊಲೀಸರು ಕೇರಳಕ್ಕೆ ತೆರಳಿದ್ದಾರೆ ಎನ್ನಲಾಗಿದ್ದು ಆರೋಪಿ ಕೇರಳದಲ್ಲಿ ತಲೆ ಮರೆಸಿಕೊಂಡಿರುವ ಬಗ್ಗೆ ಸಂಶಯ ಮೂಡಿದೆ.
ಉಡುಪಿ ಡಿವೈಎಸ್‌ಪಿ ದಿನಕರ್ ಪಿ, ನೇತೃತ್ವದ ತಂಡ ಅಲ್ಲಿಗೆ ತೆರಳಿದ್ದು, ಆರೋಪಿಯನ್ನು ಬಂಧಿಸಿ ಕರೆತರುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಆದರೆ ಖಚಿತ ಮಾಹಿತಿ ಮಾತ್ರ ಲಭ್ಯವಾಗಿಲ್ಲ. ಪೊಲೀಸರ ಅಧಿಕೃತ ಹೇಳಿಕೆಯಿಂದಷ್ಟೆ ಸತ್ಯಾಂಶ ಹೊರಬರಲಿದೆ