ಉಡುಪಿ ಬರ್ಬರಹತ್ಯೆ ಪ್ರಕರಣ: ಆರೋಪಿ ಅರೆಸ್ಟ್
ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಉಡುಪಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿ ಪೊಲೀಸರು ಪ್ರವೀಣ್ ಅರುಣ್ ಚೌಗಲೆ ಎಂಬಾತನನ್ನು ಬಂಧಿಸಿದ್ದಾರೆ. ಈತ ಮಂಗಳೂರು ಏರ್ ಏರ್ಪೋರ್ಟ್ ಸೆಕ್ಯೂರಿಟಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮೊಬೈಲ್ ಟವರ್ ಆಧರಿಸಿ ಕುಡಚಿಯಲ್ಲಿ ಬಂಧಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.