ಐನಾಝ್’ಳನ್ನು ಟಾರ್ಗೆಟ್ ಮಾಡಿ ನಾಲ್ವರನ್ನು ಕೊಚ್ಚಿ ಕೊಂದ ಪ್ರವೀಣ್ ಚೌಗಲೆ
ಉಡುಪಿ: ನೇಜಾರಿನಲ್ಲಿ ತಾಯಿ, ಮಕ್ಕಳ ಭೀಕರ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದ ಆರೋಪಿ ಪ್ರವೀಣ್ ಅರುಣ್ ಚೌಗಲೆ(39. ವ) ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.
ಉಡುಪಿ ಎಸ್ಪಿ ಕಚೇರಿಯಲ್ಲಿಂದು ಮಾತನಾಡಿದ ಎಸ್ಪಿ ಐನಾಜ್ ಮೇಲಿನ ದ್ವೇಷಕ್ಕೆ ಕೊಲೆ ಮಾಡಿದ್ದೇನೆ ಎಂದು ಬಾಯ್ಬಿಟ್ಟಿದ್ದಾನೆ.
ಕೃತ್ಯಕ್ಕೆ ಬಳಸಿದ ಆಯುಧವನ್ನು ಇನ್ನಷ್ಟೇ ವಶಪಡಿಸಿಕೊಳ್ಳಬೇಕಾಗಿದೆ.
ಮಂಗಳೂರು ಏರ್ ಇಂಡಿಯಾದಲ್ಲಿ ಕ್ಯಾಬಿನ್ ಕ್ರೂ ಮೆಂಬರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಪ್ರವೀಣ್, ಗಗನಸಖಿ ಐನಾಝ್ ಮೇಲೆ ದ್ವೇಷದಲ್ಲಿ ಈ ಕೊಲೆ ಮಾಡಿದ್ದಾನೆ. ತಡೆಯಲು ಬಂದ ತಾಯಿ ಹಾಗೂ ಇಬ್ಬರು ಮಕ್ಕಳನ್ನು ಕೂಡ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ. ಎಂದು ಅವರು ಹೇಳಿದರು.
ಆರೋಪಿ ಮಹಾರಾಷ್ಟ್ರದ ಸಾಂಗ್ಲಿ ಮೂಲದವನಾಗಿದ್ದು ಹಲವು ವರ್ಷಗಳಿಂದ ಮಂಗಳೂರಿನಲ್ಲಿ ವಾಸ ಮಾಡುತ್ತಿದ್ದಾನೆ ಎಂದು ಎಸ್ಪಿ ತಿಳಿಸಿದರು.
ಇನ್ನಷ್ಟು ಮಾಹಿತಿ ಹೆಚ್ಚಿನ ತನಿಖೆಯಿಂದ ತಿಳಿದು ಬರಬೇಕಿದೆ.