ಪ್ರವೀಣ್ ಚೌಗಲೆ 14 ದಿನಗಳ ಪೊಲೀಸ್ ಕಸ್ಟಡಿಗೆ
ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗಲೆ (39ವ) ಯನ್ನು ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ.
ಆರೋಪಿಯನ್ನು ಬಿಗಿ ಭದ್ರತೆಯಲ್ಲಿ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದು ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಕೋರ್ಟ್ ಆವರಣದ ಎದುರು ಜನಸ್ತೋಮವೇ ನೆರೆದಿತ್ತು.
ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಪಿಯ ಆರೋಗ್ಯ ತಪಾಸಣೆ ನಡೆಸಿ ಬಿಗಿ ಪೊಲೀಸ್ ಬಂದೋ ಬಸ್ತ್‌ನಲ್ಲಿ ಉಡುಪಿ ನ್ಯಾಯಾಲಯಕ್ಕೆ ಕರೆ ತರಲಾಯಿತು.