ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ
ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಂಝಿ ಮೊಹಮ್ಮದ್ ಉದ್ಘಾಟಿಸಿದರು. ಅರೇಬಿಕ್ ವಿಭಾಗದ ಮುಖ್ಯಸ್ಥರಾದ ರಶೀದ್ ಸಖಾಫಿ ಮಕ್ಕಳಿಗೆ ಶುಭ ಹಾರೈಸಿದರು.
ಮಕ್ಕಳ ದಿನಾಚರಣೆಯ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಾಗಿತ್ತು. ಕಾರ್ಯ್ರಮದಲ್ಲಿ ಆಡಳಿತ ಸಮಿತಿಯ ಕಾರ್ಯದರ್ಶಿ ಬಶೀರ್ ಹಾಜಿ ವಿಜೇತರಿಗೆ ಪ್ರಶಸ್ತಿ ಪ್ರಧಾನ ಮಾಡಿ ಮಕ್ಕಳಿಗೆ ಶುಭ ಹಾರೈಸಿದರು.
ಶಿಕ್ಷಕರಾದ ಕುಮಾರಿ ಸಿನ್ವಾನ, ಶಾಕಿರ ಮತ್ತು ಇಮ್ತಿಯಾಝ್ ಸಿ ಎಂ ತಮ್ಮ ಸ್ಪೂರ್ತಿದಾಯಕ ಮಾತುಗಳಿಂದ ಮಕ್ಕಳನ್ನು ಹುರಿದುಂಬಿಸಿದರು. ಕಾರ್ಯಕ್ರಮವನ್ನು ಶಿಕ್ಷಕಿ ಕುಮಾರಿ ಫಹಿಮಾ ಬಾನು ನಿರೂಪಿಸಿದರು. ಶಿಕ್ಷಕಿಯಾದ ಫಾತಿಮತ್ ಸನನ್ ಸ್ವಾಗತಿಸಿದರು. ಶಿಕ್ಷಕಿ ಖತೀಜತುಲ್ ಸಬೀಲ ವಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಬೋಧಕ ಮತ್ತು ಬೋಧಕೇತರ ವೃಂದದವರು ಉಪಸ್ಥಿತರಿದ್ದರು.