ಗಗನಸಖಿ ಐನಾಝ್ ಮೇಲೆ ಪ್ರವೀಣ್ ಚೌಗುಲೆಗಿದ್ದ ಅತಿಯಾದ ದ್ವೇಷವೇ ಕೊಲೆಗೆ ಕಾರಣ..!
ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ, ಏರ್ ಇಂಡಿಯಾ ಸಿಬ್ಬಂದಿ ಪ್ರವೀಣ್ ಅರುಣ್ ಚೌಗುಲೆಗೆ ಸಹಪಾಠಿ ಗಗನಸಖಿ ಐನಾಝ್ ಮೇಲಿನ ಅಸೂಯೆ ಮತ್ತು ದ್ವೇಷವೇ ಈ ಕೊಲೆಗೆ ಕಾರಣ ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.
ಆರೋಪಿಯನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು ಮನೆಗೆ ಕರೆದುಕೊಂಡು ಹೋಗಿ ಮಹಜರು ಕಾರ್ಯ ಕೂಡಾ ನಡೆಸಿದ್ದಾರೆ. ಐನಾಝ್‌ಳನ್ನು ಅತಿಯಾಗಿ ಹಚ್ಚಿಕೊಂಡು ಆಕೆ ತನ್ನ ನಿಯಂತ್ರಣದಲ್ಲಿಯೇ ಇರಬೇಕೆಂಬ ಮನಸ್ಥಿತಿಯಿಂದ ಈ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.