ಪ್ರವೀಣ್ ಕಿರುಕುಳದಿಂದ ಆತನ ಮೊಬೈಲ್ ನಂಬರನ್ನು ಬ್ಲಾಕ್ ಮಾಡಿದ್ದ ಐನಾಝ್- ಸಹೋದರ ಅಸಾದ್
ಉಡುಪಿ: ಆರೋಪಿ ಪ್ರವೀಣ್ ಚೌಗುಲೆ ಕಿರುಕುಳದಿಂದ ಐನಾಝ್, ಆತನ ಮೊಬೈಲ್ ನಂಬರನ್ನು ಬ್ಲಾಕ್ ಮಾಡಿದ್ದಳು. ಆತನ ಕಿರುಕುಳದ ಬಗ್ಗೆ ಮನೆಯಲ್ಲಿ ಹೇಳಿದರೆ ತಂದೆ ಅವಳನ್ನು ಕೆಲಸಕ್ಕೆ ಹೋಗಬೇಡ ಎನ್ನುತ್ತಾರೆ ಎನ್ನುವ ಭಯದಿಂದ ಅವಳು ಮನೆಯಲ್ಲಿ ವಿಚಾರವನ್ನು ಹೇಳಿರಲಿಲ್ಲ ಎಂದು ಮೃತ ಐನಾಝ್ ಅವರ ಸಹೋದರ ಅಸಾದ್ ಹೇಳಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಮಹಿಳೆಯರಿಗೆ ಭದ್ರತೆ ಬೇಕು. ಕೆಲಸ ಮಾಡುವ ಸ್ಥಳದಲ್ಲಿ ಕಿರುಕುಳ ಇದ್ದರೆ ಮಹಿಳೆಯರು ಹೇಳಿ ಕೊಳ್ಳುವುದಿಲ್ಲ. ಆದುದರಿಂದ ತಮ್ಮ ಸಮಸ್ಯೆ ಹೇಳಿಕೊಳ್ಳಲು ಮಹಿಳೆಯರಿಗೆ ಅವಕಾಶ ಸಿಗಬೇಕು ಎಂದು ಅವರು ಹೇಳಿದ್ದಾರೆ.