ವಿಪಕ್ಷ ನಾಯಕನಾಗಿ ಆರ್ ಅಶೋಕ್ ಆಯ್ಕೆಗೆ ಕಾಂಗ್ರೆಸ್ ಪ್ರತಿಕ್ರಿಯೆ
ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕನಾಗಿ ಆಯ್ಕೆಯಾಗಿರುವ ಆರ್ ಅಶೋಕ್ ಅವರನ್ನು ಕಾಂಗ್ರೆಸ್ ಕಾಲೆಳೆದಿದೆ. ಕನಕಪುರದಲ್ಲಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋತಿರುವ ಬಿಜೆಪಿ ಅಭ್ಯರ್ಥಿ ಈಗ ವಿರೋಧ ಪಕ್ಷದ ನಾಯಕ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಆರ್.ಅಶೋಕ್ ಆಯ್ಕೆಗೆ ಕಾಂಗ್ರೆಸ್ ಲೇವಡಿ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ವಿರೋಧ ಪಕ್ಷದ ನಾಯಕನಾಗಲು ಬೇಕಿರುವ ಜ್ಞಾನ, ಅರ್ಹತೆ ಯಾವುದೂ ಇಲ್ಲದ ನಕಲಿ ಸಾಮ್ರಾಟನೇ ಕೊನೆಯ ಆಯ್ಕೆಯಾಗಿದ್ದು ಬಿಜೆಪಿ ನಾಯಕರ ಬರಗಾಲ ಎದುರಿಸುತ್ತಿರುವುದಕ್ಕೆ ನಿದರ್ಶನ ಎಂದು ವ್ಯಂಗ್ಯವಾಡಿದ್ದು
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಂತಹ ನಾಯಕರೆದುರು ತರಗೆಲೆಯಂತಹ ವ್ಯಕ್ತಿಯನ್ನು ತಂದು ಕೂರಿಸಿದೆ ಬಿಜೆಪಿ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.