ಕರಾವಳಿ

ಸುಳ್ಯ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ 25ನೇ ವರ್ಷಕ್ಕೆ ಪಾದರ್ಪಣೆ: ನ.27ರಂದು ಈಶ್ವರಮಂಗಲದಲ್ಲಿ ನೂತನ ಶಾಖೆ ಉದ್ಘಾಟನೆ :ಇಕ್ಬಾಲ್ ಎಲಿಮಲೆ



ಸುಳ್ಯ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ಸಹಕಾರಿ ರಂಗದಲ್ಲಿ ತೊಡಗಿಕೊಂಡು 24 ವರ್ಷಗಳನ್ನು ಪೂರೈಸಿ 25ನೇ ವರ್ಷಕ್ಕೆ ಪಾದಾರ್ಪಣೆಗೈಯುತ್ತಿದೆ. ಇದೀಗ ನಮ್ಮ ಸಂಘದ ನೂತನ ಶಾಖೆಯು ಪುತ್ತೂರು ತಾಲೂಕಿನ ಈಶ್ವರಮಂಗಲದ ಹೀರಾ ಟವರಿನಲ್ಲಿ ನವಂಬರ್ 27ರಂದು ಶುಭಾರಂಭಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಎಲಿಮಲೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ತಿಳಿಸಿದ್ದಾರೆ.

ಸುಳ್ಯದ ಗಾಂಧಿನಗರ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘದ ಕಚೇರಿಯಲ್ಲಿ ನವಂಬರ್ 18 ರಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ನಮ್ಮ ಸಂಘವು 1997 ನವಂಬರ್ ತಿಂಗಳಿನಲ್ಲಿ ಪ್ರಾರಂಭಗೊಂಡು ಸುದೀರ್ಘ 24 ವರ್ಷಗಳನ್ನು ಪೂರೈಸಿ 25ನೇ ವರ್ಷಕ್ಕೆ ಪಾದರ್ಪಣೆಗೆಯುತ್ತಿದೆ.ಉತ್ತಮ ಸೇವೆಯನ್ನು ನೀಡುವ ಮೂಲಕ ಸಹಕಾರಿ ಸಂಘದಲ್ಲಿ ತೊಡಗಿಸಿಕೊಂಡು ಜಿಲ್ಲಾಮಟ್ಟದಲ್ಲಿ ಗುರುತಿಸಿಕೊಂಡಿದೆ. ಅಲ್ಪಸಂಖ್ಯಾತರ ವರ್ಗದ ಜನರ ಅಭಿವೃದ್ಧಿಗಾಗಿ ಹಾಗೂ ಪ್ರಗತಿಗಾಗಿ ಸ್ಥಾಪನೆಗೊಂಡ ನಮ್ಮ ಸಂಘವು ಪ್ರಸ್ತುತ ಸಂದರ್ಭದಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿಕೊಂಡು ನಿರಂತರ ಎರಡು ವರ್ಷದಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ಇವರಿಂದ ಉತ್ತಮ ಸಹಕಾರಿ ಸಂಘದ ಸಾಧನಾ ಪ್ರಶಸ್ತಿಯನ್ನು ಪಡೆದಿರುತ್ತದೆ ಎಂದರು.

ಕಳೆದ ಎರಡು ವರ್ಷಗಳ ಹಿಂದೆ ಬೆಳ್ಳಾರೆಯಲ್ಲಿ ನೂತನ ಶಾಖೆಯನ್ನು ಆರಂಭಿಸಿ ಉತ್ತಮ ರೀತಿಯಲ್ಲಿ ಪ್ರಗತಿಯನ್ನು ಹೊಂದಿದ್ದು ಸದಸ್ಯರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ.
ಮುಂದಿನ ದಿನಗಳಲ್ಲಿ ನಮ್ಮ ಶಾಖೆಯನ್ನು ಜಿಲ್ಲಾ ಮಟ್ಟಕ್ಕೆ ವಿಸ್ತರಿಸುವ ಗುರಿಯನ್ನು ಹೊಂದಿಕೊಂಡಿರುವುದಾಗಿ ಅವರು ಹೇಳಿದರು.


ಸಂಘವು ನವಂಬರ್ 27ರಂದು ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ನೂತನ ಶಾಖೆಯನ್ನು ಉದ್ಘಾಟನೆ ಮಾಡುತ್ತಿದ್ದು ನೂತನ ಸಂಸ್ಥೆಯನ್ನು ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ಉದ್ಘಾಟಿಸಲಿದ್ದು,ಸಂಘದ ಭದ್ರತಾ ಕೊಠಡಿಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಮೊಬೈಲ್ ಬ್ಯಾಂಕಿಂಗ್ ಅನ್ನು ನಮ್ಮ ಗ್ರಾಹಕರಿಗೆ ಪರಿಚಯಿಸುವ ಕೀರ್ತಿ ನಮಗೆ ಲಭಿಸಿದ್ದು ಈ’ಬ್ಯಾಂಕಿಂಗ್ ಸೇವೆಯ ಯೋಜನೆಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಐ ಕೆ ಮಹಮ್ಮದ್ ಇಕ್ಬಾಲ್ ಎಲಿಮಲೆ ವಹಿಸಲಿದ್ದು
ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರಾದ ಬಿ ರಮನಾಥ ರೈ ಉಪಸ್ಥಿತರಿದ್ದು ಸಂಘದ ಗ್ರಾಹಕರಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟು ಛಾಪಾ ಕಾಗದಕ್ಕೆ ಚಾಲನೆ ನೀಡಲಿದ್ದು, ಜಯರಾಮ ರೈ 2024ನೇ ಸಾಲಿನ ಸಂಘದ ಕ್ಯಾಲೆಂಡರ್ ಬಿಡುಗಡೆಗೊಳಿಸಲಿದ್ದಾರೆ.


ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಸಹಕಾರಿ ಸಂಘದ ಅಧಿಕಾರಿಗಳು, ಸಹಕಾರಿ ಧುರೀಣರು, ಸಾಮಾಜಿಕ, ರಾಜಕೀಯ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಹಾಜಿ ಮುಹಿಯದ್ದೀನ್ ಫ್ಯಾನ್ಸಿ, ನಿರ್ದೇಶಕರುಗಳಾದ ಎಸ್ ಸಂಸುದ್ದೀನ್ ಅರಂಬೂರು, ಹಸೈನಾರ್ ಎಂ ಕೆ ಕಲ್ಲುಗುಂಡಿ,ಉಮ್ಮರ್ ಶಾಪಿ ಕುತ್ತಮೊಟ್ಟೆ, ಜಾರ್ಜ್ ಡಿ’ಸೋಜಾ ಕನಿಕರಪಳ್ಳ, ಶ್ರೀಮತಿ ಆಮಿನ ಎಸ್ ಜಯನಗರ, ಶ್ರೀಮತಿ ಜೂಲಿಯ ಕ್ರಾಸ್ತ ಬೀರಮಂಗಲ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರಜ್ವಲ್ ನಾಯಕ್ ಐ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!