ಅಂತಾರಾಷ್ಟ್ರೀಯಕರಾವಳಿ

ವಂಚನೆಗೆ ಒಳಗಾಗಿ ಸೌದಿ ಅರೇಬಿಯಾದಲ್ಲಿ ಬಂಧಿಯಾಗಿದ್ದ ಕಡಬದ ಯುವಕ ಇಂದು ಸ್ವದೇಶಕ್ಕೆ ಆಗಮನ



ಕಡಬ: ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ಕಡಬ ತಾಲೂಕಿನ ಐತ್ತೂರು ಗ್ರಾಮದ ಮುಜೂರು ನಿವಾಸಿ ಚಂದ್ರಶೇಖರ್‌ ಕೊನೆಗೂ ಬಂಧ ಮುಕ್ತಗೊಂಡಿದ್ದು ಇಂದು (ನ.20) ಸ್ವದೇಶಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಬಂಧನಕ್ಕೆ ಒಳಗಾಗಿದ್ದ ಚಂದ್ರಶೇಖರ್‌ ಅವರನ್ನು
ರಿಯಾದ್‌ನಿಂದ ಪೊಲೀಸರು ಅವರನ್ನು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ತಮ್ಮ ಮನೆಗೆ ಬರಲಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!