ಕರಾವಳಿಕ್ರೈಂ

ಕಡಬ: ನೆಕ್ಕಿತ್ತಡ್ಕ ದರ್ಗಾದ ಬೀಗ ಮುರಿದು ಕಳ್ಳತನ



ಕಡಬ: ಇಲ್ಲಿಗೆ ಸಮೀಪದ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ದರ್ಗಾದ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಹಣ ಕದ್ದು ಪರಾರಿಯಾಗಿರುವ ಘಟನೆ ನ.20ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

ತಡರಾತ್ರಿ ಇಬ್ಬರು ಕಳ್ಳರು ಬಾಗಿಲಿನ ಬೀಗ ಮುರಿದು ಒಳ ನುಗ್ಗಿ ಹಣವನ್ನು ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!