ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡ ಪ್ರಕಟ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿಣ ಐದು ಪಂದ್ಯಗಳ ಟಿ20 ಸರಣಿಗೆ ಬಿಸಿಸಿಐ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಭಾರತದ ವಿಶ್ವಕಪ್ ತಂಡದಲ್ಲಿದ್ದ ಸೂರ್ಯಕುಮಾರ್ ಯಾದವ್ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರಿತ್ ಬುಮ್ರಾ, ಮಹಮ್ಮದ್ ಸಿರಾಜ್, ಕೆಎಲ್ ರಾಹುಲ್ ಸೇರಿದಂತೆ ಸ್ಟಾರ್ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಶ್ರೇಯಸ್ ಅಯ್ಯರ್ ಕೊನೆಯ ಎರಡು ಟಿ20 ಪಂದ್ಯಗಳಿಗೆ ಉಪನಾಯಕನಾಗಿ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಸರಣಿಯು ನವೆಂಬರ್ 23 ರಂದು ವಿಶಾಖಪಟ್ಟಣದಲ್ಲಿ ಪ್ರಾರಂಭವಾಗಿ ಡಿಸೆಂಬರ್ 3 ರಂದು ಬೆಂಗಳೂರಿನಲ್ಲಿ ಮುಕ್ತಾಯಗೊಳ್ಳಲಿದೆ.
ಭಾರತ ತಂಡ ಇಂತಿದೆ: ಸೂರ್ಯಕುಮಾರ್ ಯಾದವ್ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್, ಮುಖೇಶ್ ಕುಮಾರ್.