ರಾಜ್ಯ ಮಟ್ಟದ ಹಿಯಾ ಫಿಯೆಸ್ಟದಲ್ಲಿ ಪ್ರಶಸ್ತಿ ವಿಜೇತ ಸಾಲ್ಮರ ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಕಾಲೇಜು ವಿದ್ಯಾರ್ಥಿನಿಯರಿಗೆ ಅಭಿನಂದನಾ ಸಮಾರಂಭ
ಪುತ್ತೂರು: ಇತ್ತೀಚೆಗೆ ಮೌಂಟನ್ ವ್ಯೂ ಸಮೂಹ ಸಂಸ್ಥೆಯ ಸಭಾಂಗಣದಲ್ಲಿ ಮಹಿಳೆಯರಿಗಾಗಿ ನಡೆದ 'ಸಮಸ್ತ'ದ ಫಾಳಿಲಾ-ಫಳೀಲಾ ಕಾಲೇ
ಜುಗಳ ರಾಜ್ಯ ಮಟ್ಟದ ಹಿಯಾ ಫಿಯೆಸ್ಟ ಸ್ಪರ್ಧಾ ಕಾರ್ಯಕ್ರಮದಲ್ಲಿ ದ್ವಿತೀಯ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯ ಅಧೀನದ ಅಸ್ವಾಲಿಹಾ ವುಮೆನ್ಸ್ ಕಾಲೇ
ಜು ವಿದ್ಯಾರ್ಥಿನಿಯರನ್ನು ಆಡಳಿತ ಸಮಿತಿ ವತಿಯಿಂದ
ಅಭಿನಂದಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಪಡೀಲ್ ಅವರು, ರಾಜ್ಯ ಮಟ್ಟದ ಫಾಳಿಲಾ- ಫಳೀಲಾ ಹಿಯಾ ಫಿಯೆಸ್ಟ ಕಾರ್ಯಕ್ರಮದ ಯಶಸ್ವಿಗೆ ಹರ್ಷ ವ್ಯಕ್ತ ಪಡಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಮುಹಮ್ಮದ್ ಸಾಬ್ ಹಾಜಿ ಅವರು ಹಿಯಾ ಫಿಯೆಸ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕಾಲೇಜು ವಿದ್ಯಾರ್ಥಿನಿಯರನ್ನು ಅಭಿನಂದಸಿದರು. ಶಾಲಾ ದೈಹಿಕ ಶಿಕ್ಷಕ ಅಶ್ರಫ್ ಮಾತನಾಡಿ ಅಚ್ಚುಕಟ್ಟಾಗಿ ಕಾರ್ಯಕ್ರಮ ಸಂಘಟಿಸಿದ ಫಾಳಿಲಾ ಕೇಂದ್ರೀಯ ಬೋರ್ಡ್ ನ ಕಾರ್ಯವಿಧಾನವನ್ನು ಪ್ರಶಂಸಿಸಿದರು.
ಶಾಲಾ ಶಿಕ್ಷಕ ಅಬ್ದುರ್ರವೂಫ್, ಕಾರ್ಯಾಲಯ ನಿರ್ವಾಹಕರಾದ ಯೂಸುಫ್ ಕೂಟತ್ತಾನ, ಅಬ್ದುಲ್ ಹಮೀದ್ ಮೊದಲಾದವರು ಉಪಸ್ಥಿತರಿದ್ದರು.
ಉಸ್ತಾದ್ ಕೆ.ಎಂ.ಎ.ಕೊಡುಂಗಾಯಿ ಫಾಝಿಲ್ ಹನೀಫಿ ಸ್ವಾಗತಿಸಿ ಫಾಳಿಲಾ ಸಮನ್ವಯ ಶರೀಅತ್, ಪಿ.ಯು.ಶಿಕ್ಷಣ ವ್ಯವಸ್ಥೆ ಮತ್ತು ಹಿಯಾ ಫಿಯೆಸ್ಟ ಪ್ರತಿಭಾ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಈ ಕಾರ್ಯಕ್ರಮದ ಮೊದಲು ಕಾಲೇಜ್ ನ ಉಪನ್ಯಾಸಕಿಯರ ನೇತೃತ್ವದಲ್ಲಿ ವಿವಿಧ ಪ್ರತಿಭಾ ಕಾರ್ಯಕ್ರಮ ಮತ್ತು ಸ್ಮರಣಿಕೆ ವಿತರಣೆ ನಡೆಯಿತು.