ಮೋದಿ ಸರಕಾರ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗುತ್ತಿದೆ: ನಳಿನ್ ಕುಮಾರ್
ಮಂಗಳೂರು: ರಾಜ್ಯದಿಂದ ಒಂದು ರೂಪಾಯಿ ಬಿಡುಗಡೆಯಾಗಿಲ್ಲ. ನರೇಂದ್ರ ಮೋದಿ ಸರ್ಕಾರ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗುತ್ತಿದೆ. ಈ ಸರ್ಕಾರ ಭ್ರಷ್ಟಾಚಾರದ ಸರ್ಕಾರ, ಅಧಿಕಾರಿಗಳ ಸಂಬಳ ಕೊಡಲು ಕೂಡ ಹಣ ಇಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಳಗಾವಿ ಅಧಿವೇಶನ ಮುಗಿದ ಬಳಿಕ ಕಾಂಗ್ರೆಸ್ ನಲ್ಲಿ ದೊಡ್ಡ ಪರಿವರ್ತನೆಯಾಗಲಿದೆ. ಮುಖ್ಯಮಂತ್ರಿ ಹುದ್ದೆಗೆ ಹತ್ತಾರು ಟವಲ್ ಗಳು ಈಗಾಗಲೇ ಬಿದ್ದಿವೆ. ಜಾರಕಿಹೊಳಿ, ಪರಮೇಶ್ವರ್ ಜೊತೆಗೆ ದಲಿತ ಸಿಎಂ ಕಾರ್ಡ್ ಹೊರಟಿದೆ. ಪ್ರಿಯಾಂಕ್ ಖರ್ಗೆ, ಡಿಕೆಶಿ ಎಲ್ಲರೂ ಹೊರಟ ಕಾರಣ ಸರ್ಕಾರ ಬೀಳಬಹುದು ಎಂದರು. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಟ್ಡಿದೆ ಎಂದೂ ಇದೇ ವೇಳೆ ಅವರು ವಾಗ್ದಾಳಿ ನಡೆಸಿದರು.