ಮಂಗಳೂರು ಲೋಕಸಭಾ ಕ್ಷೇತ್ರ: ಬಿಜೆಪಿಯಿಂದ ಮತ್ತೆ ನಳಿನ್ ಕುಮಾರ್ ಕಣಕ್ಕೆ..?
ಮಂಗಳೂರು: ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದ ವಿಜಯೇಂದ್ರ ಅವರು, ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದು ಮತ್ತೆ ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸಿಕೊಡಿ ಎಂದ ಮನವಿ ಮಾಡಿದ್ದಾರೆ.
ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ವಿಜಯೇಂದ್ರ ಅವರು ಮುಂದಿನ ಲೋಕಸಭಾ ಚುನಾವಣೆಯನ್ನ ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಮತ್ತೊಮ್ಮೆ ನಮ್ಮ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸುವ ಕೆಲಸ ಮಾಡಬೇಕಿದೆ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.
ನಳಿನ್ ಕುಮಾರ್ ಕಟೀಲ್ ವಿರುದ್ದ ಸ್ವಪಕ್ಷೀಯರಲ್ಲೇ ವಿರೋಧ ಕಂಡು ಬರುತ್ತಿರುವುದರ ಮಧ್ಯೆ ವಿಜಯೇಂದ್ರರ ಹೇಳಿಕೆ ಭಾರೀ ಸಂಚಲನ ಸೃಷ್ಟಿಸಿದೆ.