ಬೆಳ್ತಂಗಡಿ: ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದು ವಿದ್ಯಾರ್ಥಿ ಮೃತ್ಯು
ಬೆಳ್ತಂಗಡಿ: ಬೈಕ್ ಡಿವೈಡರ್ ಗೆ ಢಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಉಜಿರೆಯಲ್ಲಿ ನಡೆದಿದೆ.
![](https://newsbites.in/wp-content/uploads/2023/11/IMG_20231124_120209.jpg)
ಕಲ್ಮಂಜ ಗ್ರಾಮದ ಕರಿಯನೆಲ ಆನಂದ ಗೌಡರ ಪುತ್ರ, ಉಜಿರೆಯ ಎಸ್.ಡಿ.ಎಮ್ ಡಿಪ್ಲೊಮಾ ವಿದ್ಯಾರ್ಥಿ ದಿಕ್ಷೀತ್ (20) ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.
ಗುರುವಾರ ಕಾಲೇಜಿಗೆ ಮರಳುತ್ತಿರುವಾಗ ಘಟನೆ ನಡೆದಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದ ಅವರು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.