ಕರಾವಳಿ

ನ.27:ಈಶ್ವರಮಂಗಲದಲ್ಲಿ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ಧೋದ್ಧೇಶ ಸಹಕಾರ ಸಂಘದ ನೂತನ ಶಾಖೆ ಉದ್ಘಾಟನೆ: ಯು.ಟಿ ಖಾದರ್ ಆಗಮನ

ಪುತ್ತೂರು: ಸುಳ್ಯದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ಧೋದ್ಧೇಶ ಸಹಕಾರ ಸಂಘದ ನೂತನ ಶಾಖೆ ಈಶ್ವರಮಂಗಲ ಹಿರಾ ಟವರ್‌ನ ನೆಲ ಮಹಡಿಯಲ್ಲಿ ನ.27ರಂದು ಬೆಳಿಗ್ಗೆ ಗಂಟೆ 11ಕ್ಕೆ ಉದ್ಘಾಟನೆಗೊಳ್ಳಲಿದೆ.

ವಿಧಾನಸಭಾ ಅಧ್ಯಕ್ಷರಾದ ಯು.ಟಿ ಖಾದರ್ ಅವರು ಶಾಖೆಯನ್ನು ಉದ್ಘಾಟಿಸಲಿದ್ದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈಯವರು ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ಅವರು ಮೊಬೈಲ್ ಬ್ಯಾಂಕಿಂಗ್‌ನ್ನು ಉದ್ಘಾಟನೆ ಮಾಡಲಿದ್ದಾರೆ.

ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದ್ಧೋದ್ಧೇಶ ಸಹಕಾರ ಸಂಘದ ಅಧ್ಯಕ್ಷರಾದ ಐ.ಕೆ ಮಹಮ್ಮದ್ ಇಕ್ಬಾಲ್ ಎಲಿಮಲೆ ಅವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವರಾದ ಬಿ.ರಮಾನಾಥ ರೈಯವರು ಗ್ರಾಹಕರಿಕೆ ವಿವಿಧ ಸೌಲಭ್ಯಗಳನ್ನು ಬಿಡುಗಡೆ ಮಾಡಲಿದ್ದಾರೆ. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಇದರ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟುರವರು ಛಾಪಾ ಕಾಗದ ಬಿಡುಗಡೆಗೊಳಿಸಲಿದ್ದು ಇನ್ನೋರ್ವ ನಿರ್ದೇಶಕರಾದ ಎಸ್.ಬಿ ಜಯರಾಮ ರೈಯವರು ಕ್ಯಾಲೆಂಡರ್ ಬಿಡುಗಡೆ ಮಾಡಲಿದ್ದಾರೆ. ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!