ಕರಾವಳಿಕ್ರೈಂ

ಬೆಳ್ತಂಗಡಿ: ಕಾರೊಂದರ ಮೇಲೆ ಕಾಡಾನೆ ದಾಳಿ: ಇಬ್ಬರಿಗೆ ಗಾಯ



ಬೆಳ್ತಂಗಡಿ: ಕಾಡಾನೆಯೊಂದು ಕಾರೊಂದರ ಮೇಲೆ ದಾಳಿ ನಡೆಸಿರುವ ಘಟನೆ ಕಕ್ಕಿಂಜೆ ನೆರಿಯ ರಸ್ತೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಕಾರಿನಲ್ಲಿ ಆರು ಜನ ಪ್ರಯಾಣಿಸುತ್ತಿದ್ದರು. ಈ ವೇಳೆ ದಾಳಿ ಒಂಟಿ ಸಲಗ ರಸ್ತೆಯಲ್ಲಿ ಪ್ರತ್ಯಕ್ಷಗೊಂಡಿದ್ದು ಈ ವೇಳೆ ಕಾರನ್ನು ರಸ್ತೆ ಬದಿಯಲ್ಲಿ ಚಾಲಕ ನಿಲ್ಲಿಸಿದ್ದಾರೆ. ಆ ಸಂದರ್ಭ ಕಾರಿನ ಮೇಲೆ ಆನೆ ದಾಳಿ ಮಾಡಿದೆ ಎನ್ನಲಾಗಿದ್ದು, ಘಟನೆಯಿಂದ ಇಬ್ಬರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಕಾರು ಸಂಪೂರ್ಣ ಜಖಂಗೊಂಡಿದೆ.

ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಆನೆ ದಾಳಿಯ ಸುದ್ದಿ ಕೇಳಿದ ಸ್ಥಳೀಯರು ಆತಂಕದಲ್ಲಿದ್ದು ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!