ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಗಾಯತ್ರಿ ನಿಧನ
ಪುತ್ತೂರು: ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಗಾಯತ್ರಿ (63.ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ನ.28ರಂದು ನಿಧನರಾಗಿದ್ದಾರೆ.
ಆರೋಗ್ಯ ಇಲಾಖೆಯಲ್ಲಿ ಸುಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಗಾಯತ್ರಿ ಅವರು ತಮ್ಮ ಸೇವಾ ಅವಧಿಯಲ್ಲಿ ಉತ್ತಮ ಕಾರ್ಯದಕ್ಷತೆ ಮೂಲಕ ಜನರ ಪ್ರೀತಿಗೆ ಪಾತ್ರರಾಗಿದ್ದರು.
ಗಾಯತ್ರಿ ಅವರ ಪತಿ ಕೆಲ ವರ್ಷಗಳ ಹಿಂದೆ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದರು. ಮೃತರು ಪುತ್ರಿಯರಾದ ಮೇಘನಾ ಹಾಗೂ ಅಮೋಘ, ಅಳಿಯ ರೋಷನ್ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಗಾಯತ್ರಿ ಅವರ ಮೃತದೇಹವನ್ನು ಬೆಳಿಗ್ಗೆ 10.30ಕ್ಕೆ ಸರ್ವೆ ಪ್ರಾ.ಆರೋಗ್ಯ ಕೇಂದ್ರಕ್ಕೆ ತಂದು ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ತಿಳಿದು ಬಂದಿದೆ.