ಕರಾವಳಿಕ್ರೈಂ

ಮಂಗಳೂರಿನಲ್ಲಿ ಅನೈತಿಕ ಗೂಂಡಾಗಿರಿ: ಇಬ್ಬರ ಬಂಧನ



ಮಂಗಳೂರು: ಭಿನ್ನ ಕೋಮಿನ ಯುವಕ-ಯುವತಿ ಕೆಲಸ ಬಿಟ್ಟು ಜತೆಯಾಗಿ ಸ್ಕೂಟರ್‌ ನಲ್ಲಿ ಹೋಗುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡು ನೈತಿಕ ಪೊಲೀಸ್‌ ಗಿರಿ ನಡೆಸಿದ ಘಟನೆ ನಡೆದಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ.ಬಂಧಿತರನ್ನು ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕ್ಕಲ್ ಎಂದು ಗುರುತಿಸಲಾಗಿದೆ.

ಮಂಗಳೂರಿನಲ್ಲಿ ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಭಿನ್ನ ಕೋಮಿನ ಜೋಡಿ ಕೆಲಸ ಬಿಟ್ಟು ನ. 27 ರಂದು ಸಂಜೆ ವೇಳೆಯಲ್ಲಿ ಜತೆಯಾಗಿ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಬಜರಂಗದಳ ಕಾರ್ಯಕರ್ತರು ಜೋಡಿಯನ್ನು ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡಿದ್ದು ಬಳಿಕ ಸ್ವಲ್ಪ ಹೊತ್ತಿನಲ್ಲಿ 2 ಕೋಮಿನ ಯುವಕರು ಜಮಾಯಿಸಿದ್ದಾರೆ. ಸ್ಥಳದಲ್ಲಿ ಮಾತಿನ ಚಕಮಕಿ ನಡೆದಿದೆ. ಬಳಿಕ ಹೊಯ್ಸಳ ವಾಹನ ಪೊಲೀಸರು ಸ್ಥಳಕ್ಕೆ ಆಗಮಿಸಿ ಜೋಡಿಯನ್ನ ವಶಕ್ಕೆ ತೆಗೆದುಕೊಂಡು ಪಾಂಡೇಶ್ವರ ಠಾಣೆಗೆ ಕರೆದುಕೊಂಡು ಹೋಗಿದ್ದರು.

Leave a Reply

Your email address will not be published. Required fields are marked *

error: Content is protected !!