ಸುರಂಗದೊಳಗಿಂದ ಹೊರಗೆ ಬಂದ ಎಲ್ಲಾ 41 ಕಾರ್ಮಿಕರು
ಉತ್ತರಖಾಂಡ್ ನ ಉತ್ತರಕಾಶಿಯಲ್ಲಿ ಸುರಂಗದೊಳಗೆ ಸಿಕ್ಕಿ ಹಾಕಿಕೊಂಡಿದ್ದ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದ್ದು, 41 ಕಾರ್ಮಿಕರು ಸುರಕ್ಷಿತವಾಗಿ ಹೊರಗೆ ಬಂದಿದ್ದಾರೆ ಎಂದು ತಿಳಿದು ಬಂದಿದೆ.

ಸತತ 17 ದಿನಗಳ ನಿರಂತರ ಕಾರ್ಯಾಚರಣೆಯ ಬಳಿಕ ಸುರಂಗದ ಒಳಗೆ ಸಿಲುಕಿಕೊಂಡಿದ್ದ ಎಲ್ಲರನ್ನೂ ಸುರಕ್ಷಿತವಾಗಿ ಹೊರ ಕರೆತರಲಾಗಿದೆ. ತೀವ್ರ ಆತಂಕಕ್ಕೆ ಒಳಗಾಗಿದ್ದ ಘಟನೆಯೊಂದು ಕೊನೆಗೂ ಸುಖಾಂತ್ಯ ಕಂಡಿದೆ.