ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ: ಆರೋಪಿ ಬಂಧನ
ಪುತ್ತೂರು: ಮಹಿಳೆಯೋರ್ವರಿಗೆ ಮದ್ಯ ನೀಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿರುವ ಆರೋಪದಲ್ಲಿ ಆರ್ಯಾಪು ನಿವಾಸಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಹಾಸನ ತಾಲೂಕು ಚೆನ್ನರಾಯಪಟ್ಟಣದ ಮಹಿಳೆಯೊಬ್ಬರು ಸಾಲ್ಮರ ಗುಂಪಕಲ್ಲು ರಸ್ತೆ ಬದಿ ಅಸ್ವಸ್ಥಗೊಂಡು ಬಿದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಮಹಿಳೆ ಮದ್ಯ ನೀಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿರುವ ಆರೋಪದಲ್ಲಿ ಮೂಲತಃ ಆರ್ಯಾಪು ನಿವಾಸಿಯಾಗಿದ್ದು, ಬನ್ನೂರು ಗ್ರಾಮದ ಸಂಶುದ್ದೀನ್ ಅಸ್ಗರ್ ಆಲಿ(23 ವ) ಎಂಬವರು ಬಂಧಿತ ಆರೋಪಿ.
ಸಂತ್ರಸ್ಥ ಮಹಿಳೆಗೆ ನ.24 ರಂದು ರಾತ್ರಿ ಪುತ್ತೂರು ಬಸ್ ನಿಲ್ದಾಣದಲ್ಲಿದ್ದಾಗ ಮಹಿಳೆಗೆ ಮದ್ಯವನ್ನು ಸೇವಿಸಲು ನೀಡಿ, ನಿರ್ಜನ ಪ್ರದೇಶಕ್ಕೆ ಕರೆದು ಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾರೆಂದು ಆರೋಪಿಸಲಾಗಿತ್ತು. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ.28ರಂದು ಆರೋಪಿಯನ್ನು ಪುತ್ತೂರು ಬಸ್‌ನಿಲ್ದಾಣದಲ್ಲಿ ವಶಕ್ಕೆ ಪಡೆದು ಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.