ರಾಜಕೀಯರಾಷ್ಟ್ರೀಯ

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುತ್ತೇವೆ, ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ



ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದೇ ತರುತ್ತೆ, ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಾತನಾಡಿದ ಅವರು
ಸಿಎಎ ಜಾರಿಯಾಗುವುದನ್ನು ಮಮತಾ ಬ್ಯಾನರ್ಜಿ ವಿರೋಧಿಸುತ್ತಾ ಬಂದಿದ್ದಾರೆ. ಆದರೆ ಯಾರೊಬ್ಬರೂ ಕಾಯ್ದೆ ತಡೆಯಲು ಸಾಧ್ಯವಿಲ್ಲ. ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯು ಕೇಂದ್ರ ಸರ್ಕಾರ ಕಾಯ್ದೆ ಜಾರಿ ಮಾಡಿಯೇ ಮಾಡುತ್ತದೆ. 2024ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸಾಧನೆ ಮಾಡಲಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಮೇಲೆ ಭ್ರಷ್ಟಾಚಾರ ಮತ್ತು ರಾಜಕೀಯ ಹಿಂಸಾಚಾರ ಆರೋಪಿಸಿ ವಾಗ್ದಾಳಿ ನಡೆಸಿದ ಅಮಿತ್ ಶಾ, ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವಂತೆ ಕರೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!