ಭ್ರೂಣ ಲಿಂಗ ಪತ್ತೆ, ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ಸರಕಾರದ ಆದೇಶ
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದಿರುವ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣದ ತನಿಖೆಯನ್ನು ಸರಕಾರ ಸಿಐಡಿಗೆ ವಹಿಸಿ ಆದೇಶಿಸಿದೆ.
ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಪ್ರಕರಣದ ತನಿಖೆಯನ್ನು ಸಿಐಡಿ ಮೂಲಕ ನಡೆಸುವಂತೆ ಸೂಚಿಸಿದರು.
ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಒಂದು ಸಾವಿರಕ್ಕೂ ಅಧಿಕ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ನಡೆದಿದ್ದು, ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣಾ ಪೊಲೀಸರು ಇತ್ತೀಚಿಗೆ 9 ಮಂದಿ ಆರೋಪಿಗಳನ್ನು ಬಂಧಿಸಿದ್ದರು.