ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ: ಅಂಚೆ ಮತಗಳ ಎಣಿಕೆ ಆರಂಭ
ವಿಧಾನ ಸಭಾ ಚುನಾವಣೆ ನಡೆದ 5 ರಾಜ್ಯಗಳ ಪೈಕಿ ಇಂದು 4 ರಾಜ್ಯಗಳಿಗೆ ಮಾತ್ರ ವಿಧಾನಸಭೆ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಮಿಜೋರಾಂ ರಾಜ್ಯದಲ್ಲಿ ನಾಳೆ ಮತಗಳ ಎಣಿಕೆಯಾಗಲಿದೆ. ಇಂದು ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣಾ ಫಲಿತಾಂಶ ಹೊರ ಬೀಳಲಿದೆ.
ನಾಲ್ಕು ರಾಜ್ಯಗಳಲ್ಲೂ ಅಂಚೆ ಮತಗಳ ಮತಗಳ ಎಣಿಕೆ ಆರಂಭವಾಗಿದೆ. ಕೆಲವೇ ಗಂಟೆಗಳಲ್ಲಿ ಯಾವ ರಾಜ್ಯ ಯಾರ ತೆಕ್ಕೆಗೆ ಎಂಬ ಸ್ಪಷ್ಟ ಚಿತ್ರಣ ಹೊರ ಬರಲಿದೆ.