ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು: ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಡದಲ್ಲಿ ಬಿಜೆಪಿಯನ್ನು ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದು ಮತದಾರರಿಗೆ ಕೃತಜ್ಞತೆ ಅರ್ಪಿಸಿದ್ದಾರೆ. ಬಿ

‘ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಿಗೆ ವಿಶೇಷ ಧನ್ಯವಾದ. ನೀವೆಲ್ಲಾ ಅದ್ಭುತ ನಿದರ್ಶನ ಹಾಕಿಕೊಟ್ಟಿದ್ದೀರಿ. ಬಿಜೆಪಿಯ ಅಭಿವೃದ್ಧಿ ಮತ್ತು ಬಡವರ ಕಲ್ಯಾಣ ನೀತಿಗಳನ್ನು ಜನರಿಗೆ ನೀವು ತಲುಪಿಸಿದ ರೀತಿಗೆ ಎಷ್ಟು ಹೊಗಳಿದರೂ ಸಾಲದ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
‘ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಡದ ಚುನಾವಣಾ ಫಲಿತಾಂಶಗಳು ಒಳ್ಳೆಯ ಆಡಳಿತ ಮತ್ತು ಅಭಿವೃದ್ಧಿ ರಾಜಕಾರಣಕ್ಕೆ ಮಾತ್ರವೇ ಜನಬೆಂಬಲ ಇದೆ ಎಂಬುದನ್ನು ತೋರಿಸಿಕೊಟ್ಟಿವೆ. ಜನರ ವಿಶ್ವಾಸ ಬಿಜೆಪಿ ಮೇಲಿದೆ ಎಂದು ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.