ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯ ಶಂಕರ ಆತ್ಮಹತ್ಯೆ
ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯ ಶಂಕರ ಅವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿಯಾಗಿದ್ದು ಅರಿಯಡ್ಕ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಸದಸ್ಯ ಶಂಕರ ಮಾಡನ್ನೂರು ಆತ್ಮಹತ್ಯೆ ಮಾಡಿಕೊಂಡವರು.
ಶಂಕರ ಅವರು ವಿಪರೀತ ಸಾಲದಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿ ಡಿ.3ರಂದು ಮನೆಯವರು ಮಲಗಿದ್ದಾಗ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ
ನನ್ನ ಸಾವಿಗೆ ನಾನೇ ಕಾರಣ ಕ್ಷಮಿಸು ವನಿತಾ ಎಂದು ಮಕ್ಕಳನ್ನು ನೋಡಿಕೋ ಎಂಬುದಾಗಿ ಸೊಂಟದಲ್ಲಿ ಡೆತ್ ನೋಟ್ ಬರೆದಿದ್ದು ಕಂಡು ಬಂದಿದೆ ಎನ್ನಲಾಗುತ್ತಿದೆ.