ರಾಜಕೀಯರಾಜ್ಯರಾಷ್ಟ್ರೀಯ

ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು: ಪ್ರಧಾನಿ ಮೋದಿ ಗುಣಗಾನ ಮಾಡಿದ ಕುಮಾರಸ್ವಾಮಿ

ಬೆಂಗಳೂರು: ಐದು ರಾಜ್ಯಗಳ ಪೈಕಿ ಮೂರು ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಬಿಜೆಪಿ ಗೆಲುವು ಬೆನ್ನಲ್ಲೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಪ್ರಧಾನಿ ಮೋದಿಯವರನ್ನು ಕೊಂಡಾಡಿದ್ದು ಶುಭಾಶಯ ಸಲ್ಲಿಸಿದ್ದಾರೆ.

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಬಿಜೆಪಿ ಗೆಲುವಿಗೆ ಶುಭಾಶಯ ಕೋರಿದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಬಿಜೆಪಿಯ ಎಲ್ಲ ನಾಯಕರಿಗೆ ಅಭಿನಂದನೆಗಳು. ನರೇಂದ್ರ ಮೋದಿಯವರ ಬಲಿಷ್ಠ ನಾಯಕತ್ವದಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಈ ಫಲಿತಾಂಶ ಸ್ಪಷ್ಟ ದಿಕ್ಸೂಚಿ ಆಗಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!