ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರ ಬಾವ ಮಹದೇವಯ್ಯ ಅವರ ಶವ ಪತ್ತೆ
ನಾಪತ್ತೆಯಾಗಿದ್ದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರ ಬಾವ ಮಹದೇವಯ್ಯ ಅವರ ಶವ ಪತ್ತೆಯಾಗಿದೆ.

ಮಹದೇವಯ್ಯ ನಾಪತ್ತೆಯಾದ ಬಳಿಕ ಅವರ ಪತ್ತೆಗಾಗಿ ಪೊಲೀಸರು ವ್ಯಾಪಕ ಹುಡುಕಾಟ ನಡೆಸಿದ್ದರು. ಅವರ ನಾಪತ್ತೆ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದ್ದವು. ಅವರ ಕಾರು ಇಂದು ಬೆಳಿಗ್ಗೆ ಪತ್ತೆಯಾಗಿದ್ದು, ಅದರಲ್ಲಿ ರಕ್ತದ ಕಲೆಗಳು ಇರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಮಹದೇವಯ್ಯ ಅವರು ಕೊಲೆಯಾಗಿರುವ ಶಂಕೆ ವ್ಯಕ್ತವಾಗಿತ್ತು.
ಇದೀಗ ಚಾಮರಾಜನಗರದ ರಾಮಾಪುರದ ನಿರ್ಜನ ಪ್ರದೇಶವೊಂದರಲ್ಲಿ ಮಹದೇವಯ್ಯ ಅವರ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.