ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ದ್ವೇಷದ ರಾಜಕಾರಣಿ, ಮಹಾನ್ ಸುಳ್ಳುಗಾರ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಸಿಸ್ ನಂಟಿರುವ ಪೀರಾ ಮೌಲಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂಬ ಬಿಜೆಪಿ ನಾಯಕ ಯತ್ನಾಳ್ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ. ಅವರ ಜೊತೆಗೆ ನನಗೆ ಬಹಳ ವರ್ಷಗಳ ಸಂಬಂಧ ಇದೆ. ಆಗೆಲ್ಲ ಯಾಕೆ ಅವರು ಸುಮ್ಮನಿದ್ದರು? ಪೀರಾ ಮೌಲಿ ಅವರು ಆರೋಪ ಸಾಬೀತು ಮಾಡಿ ಎಂದು ಹೇಳಿದ್ದಾರೆ.
ಕೇಂದ್ರದಲ್ಲಿ ಅವರದ್ದೇ ಸರ್ಕಾರ ಇದೆ ಅದನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಯತ್ನಾಳ್ ಅವರು ಬಿಜೆಪಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ವಿರೋಧ ಪಕ್ಷದ ನಾಯಕನ ಸ್ಥಾನಕ್ಕೂ ಪ್ರಯತ್ನ ಮಾಡಿದ್ದರು. ಎರಡೂ ಸಿಗಲಿಲ್ಲ ಅದಕ್ಕೆ ಈಗ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.