ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಗೆದ್ದು ಬೀಗಿದ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು
ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ 12 ಸ್ಥಾನಗಳಿಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಡಿ.10ರಂದು ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.

12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಸಹಕಾರ ಭಾರತಿ ಬೆಂಬಲಿತ ಒಟ್ಟು 24 ಮಂದಿ ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದರು.
ಚುನಾವಣೆ ನಡೆದು ಫಲಿತಾಂಶ ಘೋಷಣೆಯಾದಾಗ 10 ಮಂದಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು ಮತ್ತು 2 ಮಂದಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಆ ಮೂಲಕ ಕಾಂಗ್ರೆಸ್ ಬೆಂಬಲಿತರ ತೆಕ್ಕೆಯಲ್ಲಿದ್ದ ಆಡಳಿತ ಮಂಡಳಿ ಅಧಿಕಾರ ಇದೀಗ ಸಹಕಾರ ಭಾರತಿ ಬೆಂಬಲಿತರ ಪಾಲಾಗಿದೆ. ಕಳೆದ ಅವಧಿಯಲ್ಲಿ 12ರಲ್ಲಿ 12 ಸ್ಥಾನವನ್ನೂ ಗೆದ್ದುಕೊಂಡಿದ್ದ ಕಾಂಗ್ರೆಸ್ ಬೆಂಬಲಿತರು ಈ ಬಾರಿ ನೆಲಕಚ್ಚಿದ್ದು ಕೇವಲ 2 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದಾರೆ. ವಿಜೇತರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಸೇರಿದಂತೆ ಹಲವರು ಅಭಿನಂದನೆ ಸಲ್ಲಿಸಿದ್ದಾರೆ.