ಕರಾವಳಿರಾಜ್ಯ

ಪೊಲೀಸ್ ಸಿಬ್ಬಂದಿ ಕಾಣಿಯೂರಿನ ಸೌಮ್ಯ ಪೂಜಾರಿ ಕಬಡ್ಡಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ



ಪುತ್ತೂರು: ಪಂಜಾಬ್‌ನ ಲ್ಯಾಮ್ರಿನ್ ಟೆಕ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 70ನೇ ಸೀನಿಯರ್ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರು ನಿವಾಸಿ ಬೆಂಗಳೂರಿನಲ್ಲಿ ಪೊಲೀಸ್ ಉದ್ಯೋಗಿಯಾಗಿರುವ ಸೌಮ್ಯ ಪೂಜಾರಿ ಆಯ್ಕೆ ಆಗಿದ್ದಾರೆ.

ಸೌಮ್ಯಾ ರವರು ಪ್ರಸ್ತುತ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯ ಉದ್ಯೋಗಿಯಾಗಿದ್ದು, ಕರ್ನಾಟಕ ರಾಜ್ಯ ಪೊಲೀಸ್ ಮಹಿಳಾ ಕಬಡ್ಡಿ ತಂಡದ ಸದಸ್ಯೆಯಾಗಿದ್ದಾರೆ. ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಗತಿ ಆಂಗ್ಲಮಾದ್ಯಮ ಶಾಲೆ ಹಾಗೂ ಆಳ್ವಾಸ್ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿನಿಯಾಗಿರುವ ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿ ಪುತ್ರಿ ಹಾಗೂ ಪುತ್ತೂರಿನಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಯಾಗಿರುವ ಸಂತೋಷ್ ಕುಮಾರ್ ಅವರ ಸಹೋದರಿ.

Leave a Reply

Your email address will not be published. Required fields are marked *

error: Content is protected !!