ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣ-ಇನ್ನೋರ್ವ ಆರೋಪಿಯ ಬಂಧನ
ಬೆಳಗಾವಿ: ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 8ಕ್ಕೆ ಏರಿಕೆ ಆಗಿದೆ.

ಹೊಸ ವಂಟಮೂರಿ ಗ್ರಾಮದ ಯುವತಿಯ ಸಂಬಂಧಿ ಶಿವಪ್ಪ ವಣ್ಣೂರಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆ ಮೂಲಕ ಒಟ್ಟು ಎಂಟು ಮಂದಿಯನ್ನು ಬಂಧಿಸಿ 14 ದಿನ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.