ಕರಾವಳಿಕ್ರೈಂ

ಸುಳ್ಯ: ನೇಣು ಬಿಗಿದು ಶಾಲಾ ವಿದ್ಯಾರ್ಥಿ ಆತ್ಮಹತ್ಯೆ

ಸುಳ್ಯ: ಎಲಿಮಲೆಯಲ್ಲಿ ಕಳೆದ ವರ್ಷ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿ ಶಮಂತ್ ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನೆಲ್ಲೂರು ಕೆಮ್ರಾಜೆ ಗ್ರಾಮದ ಹೊಟ್ಟುಚೋಡಿಯಲ್ಲಿ ನೆಲೆಸಿರುವ ಶಮಂತ್ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ. ಬೆಳಿಗ್ಗೆ 6 ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ಬಂದು ಶಾಲಾ ಹಿಂಬದಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳೀಯರು ವಿಷಯ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!